EducationKannada NewsKarnataka NewsPolitics

*ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ: 2013ರಲ್ಲೇ ಶಿಕ್ಷಣ ಇಲಾಖೆ ಆದೇಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಸಂಸ್ಥೆಗಳ ಆವರಣಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆಯ 2013ರ ಆದೇಶ ಮುನ್ನೆಲೆಗೆ ಬಂದಿದೆ.

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಮೈದಾನಗಳನ್ನು ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಬಳಸಲು ಅವಕಾಶ ನೀಡಬಾರದು ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ 2013ರಲ್ಲೇ ಸ್ಪಷ್ಟ ನಿರ್ದೇಶನ ನೀಡಿದೆ.

ಯಾವುದೇ ಖಾಸಗಿ ಅಥವಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ಶಾಲಾ ಆವರಣದಲ್ಲಿ ನಡೆಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂದಿನ ಆಯುಕ್ತ ಎಸ್. ಆರ್. ಉಮಾಶಂಕ‌ರ್ ಆದೇಶ ಹೊರಡಿಸಿದ್ದಾರೆ.

ಶಾಲಾ ಮೈದಾನ ಹಾಗೂ ಆವರಣಗಳು ವಿದ್ಯಾರ್ಥಿಗಳ ದೈನಂದಿನ ಪಾಠ ಪಠೇತರ ಚಟುವಟಿಕೆಗಳು, ಆಟೋಟ, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮುಂತಾದ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆಯಾಗಬೇಕು ಎಂದು ತಿಳಿಸಲಾಗಿದೆ.

Home add -Advt

ಯಾವುದೇ ಸಂದರ್ಭದಲ್ಲೂ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಅಥವಾ ಉದ್ದೇಶಗಳಿಗೆ ಶಾಲಾ ಆವರಣವನ್ನು ಬಳಸಬಾರದು ಹಾಗೂ ಇಂಥ ಚಟುವಟಿಕೆಗಳಿಗೆ ಅನುಮತಿ ನೀಡಬಾರದು. ಹಾಗೆಯೇ ಇಂಥ ಚಟುವಟಿಕೆಗಳಿಗೆ ಅರ್ಜಿಯನ್ನೂ ಸಲ್ಲಿಸಬಾರದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಸರ್ಕಾರಿ ಸಂಸ್ಥೆಗಳ ಆವರಣಗಳಲ್ಲಿ ಆರ್‌ಎಸ್‌ಎಸ್‌ (RSS) ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹಳೆಯ ಆದೇಶ ಈಗ ವೈರಲ್ ಆಗಿದೆ.

Related Articles

Back to top button