
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ನಡೆಸುತ್ತಿದ್ದ ಧರಣಿ ವಾಪಸ್ ಪಡೆಯಲಾಗಿದೆ.
ಧರಣಿ ನಿರತ ಶಿಕ್ಷಕರ ಜೊತೆ ಸಚಿವರಾದ ಆರ್.ಅಶೋಕ್ ಹಾಗೂ ಬಸವರಾಜ್ ಬೊಮ್ಮಾಯಿ ನಡೆಸಿದ ಮಾತುಕತೆ ಸಫಲವಾಗಿದ್ದು, 6 ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಶಿಕ್ಷಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ