Latest

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಒಕ್ಕೂಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಕೊರೊನಾ ಸೋಂಕಿಗೆ ತಂದೆ-ತಾಯಿ ಬಲಿಯಾಗಿ ಮಕ್ಕಳು ಅನಾಥರಾಗಿದ್ದರೆ ಅಂತಹ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದರು.

Home add -Advt

ಖಾಸಗಿ ಶಾಲೆಗಳ ಶುಲ್ಕದ ವಿಚಾರವಾಗಿ ಸರ್ಕಾರ ನಿಗದಿ ಮಾಡಿದ ಶುಲ್ಕ ಪಡೆಯಲು ನಾವು ಸಿದ್ಧ. ಪೋಷಕರ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದು ಹೇಳಿದರು.

ಶಾಸಕ ಸ್ಥಾನಕ್ಕೂ ರಮೇಶ ಜಾರಕಿಹೊಳಿ ರಾಜಿನಾಮೆ?

Related Articles

Back to top button