*ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಸಾರಿಗೆ ಸಂಚಾರ ಬಂದ್; ಶಾಲಾ ಮಕ್ಕಳು, ಸಾರ್ವಜನಿಕರಿಗೆ ತಟ್ಟಲಿದೆ ಮುಷ್ಕರದ ಬಿಸಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಸೆ.11ರಂದು ಖಾಸಗಿ ಸಾರಿಗೆ ಒಕ್ಕಟಗಳು ಬಂದ್ ಗೆ ಕರೆ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕರ ಪರದಾಟ ನಿಶ್ಚಿತವಾಗಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 36 ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ ಗೆ ಬೆಂಬಲ ನೀಡಿದ್ದು, ಇಂದು ಮಧ್ಯರಾತ್ರಿ 12ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ಮುಷ್ಕರ ನಡೆಯಲಿದೆ.
ಶಾಲಾ ವಾಹನಗಳು ಕೂಡ ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆಯಾಗಲಿದೆ. ಖಾಸಗಿ ಬಸ್, ಟ್ಯಾಕ್ಸಿ, ಕ್ಯಾಬ್, ಆಟೋ, ಏರ್ ಪೋರ್ಟ್ ಟ್ಯಾಕ್ಸಿ ಸೇರಿದಂತೆ ವಿವಿಧ ಖಾಸಗಿ ಸಾರಿಗೆ ವಾಹನಗಳು ಬಂದ್ ನಲ್ಲಿ ಭಾಗವಹಿಸಲಿದ್ದು, ನಾಳೆ ಬೆಳಿಗ್ಗೆ 10ಗಂಟೆಯಿಂದ ಕ್ರಾಂತಿವೀರ ಸಂಗೊಳ್ಲಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸಲಿವೆ.
ವೈಟ್ ಬೋರ್ಡ್ ವಾಹನಗಳು ಬಾಡಿಗೆ ಹೋಗುತ್ತಿವೆ, ಶಕ್ತಿ ಯೋಜನೆಯಿಂದಾಗಿ ಟ್ಯಾಕ್ಸಿ, ಕ್ಯಾಬ್, ಆಟೋ, ಖಾಸಗಿ ಬಸ್ ಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಅಲ್ಲದೇ ರ್ಯಾಪಿಡೋ ಬೈಕ್ ನಿಂದಾಗಿ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಾರಿಗೆ ಒಕ್ಕೂಟ ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಿದೆ.
ಇನ್ನು ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಿರಲು ಬಿಎಂಟಿಸಿ ಹೆಚ್ಚುವರಿ ಬಸ್ ನಿಯೋಜನೆಗೆ ನಿರ್ಧರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ