
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡು ಪ್ರತಿಷ್ಠಿತ ಖಾಸಗಿ ಶಾಲಾ ವಿದ್ಯಾರ್ಥಿನಿಯರು ನಡುರಸ್ತೆಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಾಲ್ಡ್ ವಿನ್ ಹಾಗೂ ಬಿಷಪ್ ಕಾಟನ್ ಶಾಲೆಯ ವಿದ್ಯಾರ್ಥಿನಿಯರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಜುಟ್ಟು ಹಿಡಿದು ಎಳೆದಾಡಿಕೊಂಡಿರುವ ವಿದ್ಯಾರ್ಥಿನಿಯರು ಬೇಸ್ ಬಾಲ್ ಸ್ಟಿಕ್ ನಿಂದ ಹೊಡೆದಾಡಿಕೊಂಡಿದ್ದಾರೆ.ಈ ಕುರಿತ ವಿಡಿಯೋ ವೈರಲ್ ಆಗಿದೆ.
ವಾಟ್ಸಾಪ್, ಇನ್ ಸ್ಟಾಗ್ರಾಮ್ ಚಾಟಿಂಗ್ ನಿಂದ ಆರಂಭವಾದ ಜಗಳ ಹೊಡೆದಾಟಕ್ಕೆ ಬಂದು ನಿಂತಿದೆ. ಬಾಯ್ ಫ್ರೆಂಡ್ ವಿಚಾರವಾಗಿ ವಿದ್ಯಾರ್ಥಿನಿಯರ ನಡುವೆ ಹೊಡೆದಾಟ ಆರಂಭವಾಗಿದೆ. ಶಾಲೆಗೆ ಬಂದ ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯನ್ನು ಮಾತನಾಡೋಣ ಎಂದು ಶಾಲೆಯ ಬಳಿ ಹೋಟೆಲ್ ಗೆ ಕರೆದಿದ್ದಾರೆ. ಹೋಟೆಲ್ ಎದುರು ನಡು ರಸ್ತೆಯಲ್ಲಿಯೇ ಜಗಳ ಆರಂಭವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಆದರೆ ಈ ಬಗ್ಗೆ ಶಾಲೆಗಳ ಆಡಳಿತ ಮಂಡಳಿ ಯಾವುದೇ ದೂರುಗಳನ್ನು ನೀಡಿಲ್ಲ ಎನ್ನಲಾಗಿದೆ.
ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ