
ಪ್ರಗತಿವಾಹಿನಿ ಸುದ್ದಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸೊಲ್ಲಾಪುರ ಮೂಲದ ದಿನೇಶ್ ನರೋಣಿ ಬಂಧಿತ ಆರೋಪಿ.
ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಚಟುವಟಿಕೆಗಳನ್ನು ಸರ್ಕಾರಿ ಜಾಗ, ಸಂಸ್ಥೆ, ಶಾಲೆ-ಕಾಲೇಜುಗಳ ಆವರಣದಲ್ಲಿ ನಿಷೇಧ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಸಚಿವ ಪ್ರಿಯಾಅಂಕ್ ಖರ್ಗೆ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವರು ಆರೋಪಿಸಿದ್ದರು. ಅಲ್ಲದೇ ನಿನ್ನೆ ವ್ಯಕ್ತಿಯೋರ್ವ ಕರೆ ಮಾಡಿ ಬೆದರಿಕೆ ಹಾಕಿರುವ ಹಾಗೂ ಅಶ್ಲೀಲವಾಗಿ ನಿಂದಿಸಿರುವ ಆಡಿಯೋ ಕೂಡ ಬಿಡುಗಡೆ ಮಾಡ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಲಾತೂರ್ ನಲ್ಲಿ ಆರೋಪಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ.