ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್, ಹಲಾಲ್, ಜಟ್ಕಾ ಕಟ್, ಆಜಾನ್, ಭಜನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುರುವ ಶಾಸಕ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ ಇದ್ದಾರೋ ಇಲ್ಲವೋ ಎಂಬುದು ಗೊತ್ತಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಖರ್ಗೆ, ರಾಜ್ಯದಲ್ಲಿ ಹಿಜಾಬ್ ನಿಂದ ಹಿಡಿದು ಆಜಾನ್, ಭಜನೆ ವರೆಗೆ ದಿನಕ್ಕೊಂದು ವಿವಾದಗಳು ಸೃಷ್ಟಿಯಾಗುತ್ತಿವೆ. ಬಜರಂಗದಳದವರು ತಾವೇ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳನ್ನು ಮಾಡುತ್ತಿದ್ದರೂ ಸಿಎಂ ಬಸವರಾಜ್ ಬೊಮ್ಮಾಯಿ ಮೌನವಾಗಿದ್ದಾರೆ. ವಿವಾದ ಸೃಷ್ಟಿಸುತ್ತಿರುವವರನ್ನು ನಿಯಂತ್ರಿಸಲು ಸಾಧ್ಯವಾಗಿತ್ತಿಲ್ಲ. ಸಿಎಂ ಬೊಮ್ಮಾಯಿ ಆರ್ ಎಸ್ ಎಸ್ ಕೈಬೊಂಬೆ, ಸೂತ್ರದ ಗೊಂಬೆಯಂತೆ ಆಡುತ್ತಿದ್ದಾರೆ ಎಂದು ಕಿಡಿಕಾರಿದರು.
ಧಮ್ಮಿಲ್ಲದ ಸರ್ಕಾರ ಕೆಲಸಕ್ಕೆ ಬಾರದ ವಿಚಾರಗಳನ್ನು ತಂದಿಡುತ್ತಿದೆ. ಸಿಎಂ ಬೊಮ್ಮಾಯಿ ಮೂಕ ಬಸವ ಆಗಿದ್ದಾರೆ. ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ವರೆಗೆ ಹೋಗಿದೆ ಎಂದರೆ ರಾಜ್ಯ ಸರ್ಕಾರಕ್ಕೆ ನಿಭಾಯಿಸಲು ಸಾಧ್ಯವಾಗಿಲ್ಲ ಎಂದರ್ಥ. ಇನ್ನು ಆಜಾನ್ ನಿಷೇಧಿಸಬೇಕು ಎಂಬ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸೌಂಡ್ ಕಂಟ್ರೋಲ್ ಎನ್ನುವುದು ಎಲ್ಲಾ ವರ್ಗಕ್ಕೂ ಅನ್ವಯವಾಗುತ್ತೆ. ಪೆಟ್ರೋಲ್, ಡೀಸೆಲ್, ಅನಿಲ ದರ ಏರಿಕೆ, ಬೆಲೆ ಏರಿಕೆ ಬಗ್ಗೆ ಜನರ ಸಮಸ್ಯೆ ಬಗ್ಗೆ ಸರ್ಕಾರದ ಯಾರೊಬ್ಬರೂ ಧ್ವನಿಯೆತ್ತುತ್ತಿಲ್ಲ. ಉದ್ಯೋಗವಿಲ್ಲದೇ ಜನತೆ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಇಂಥ ವಿಚಾರಗಳತ್ತ ಗಮನ ಹರಿಸುವುದನ್ನು ಬಿಟ್ಟು ದಿನಕ್ಕೊಂದು ವಿವಾದ ಸೃಷ್ಟಿಸಿ ಬೇಡದ ವಿಚಾರಗಳ ಬಗ್ಗೆ ಸರ್ಕಾರ ಚರ್ಚೆಗೆ ಅವಕಾಶ ನೀಡುತ್ತಿದೆ. ಸಿಎಂ ಬೊಮ್ಮಾಯಿ ಬಜರಂಗದಳ, ಆರ್ ಎಸ್ ಎಸ್ ಗೆ ಅಧಿಕಾರ ಬಿಟ್ಟು ಕೊಟ್ಟುಬಿಡಲಿ ಎಂದು ಹೇಳಿದ್ದಾರೆ.
ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಗರಿ ಗೆದರಿದ ಆಕಾಂಕ್ಷೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ