Latest

*ಇದನ್ನೇ ಬೇರೆಯವರು ಮಾಡಿದ್ರೆ ಹಿಂದು ವಿರೋಧಿ ಅಂತಾರೆ; ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸಾಹಾರ ಸೇವಿಸಿ ದೇವಾಲಯಗಳಿಗೆ ಭೇಟಿ ನೀಡಿದ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಹೋಗಿದ್ದನ್ನು ತೀವ್ರವಾಗಿ ಖಂಡಿಸಿದ್ದ ಸಿ.ಟಿ.ರವಿ, ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದರು. ಇದೀಗ ಸಿ.ಟಿ ರವಿಯವರೇ ಮಾಂಸಾಹಾರ ಸೇವಿಸಿ ಬಳಿಕ ದೇವಾಲಾಯಕ್ಕೆ ಭೇಟಿ ನೀಡಿರುವ ಫೋಟೋ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ವಾಕ್ಪ್ರಹಾರ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರಿಗೆ ಒಂದು ನ್ಯಾಯ, ನಮಗೊಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ. ಸಿ.ಟಿ.ರವಿ ಮೊದಲು ನಾನು ಮಾಂಸ ತಿಂದಿಲ್ಲ, ದೇವಸ್ಥಾನಕ್ಕೆ ಹೋಗಿದ್ದೇನೆ ಎಂದಿದ್ದರು. ಒಂದು ವೇಳೆ ತಿಂದಿದ್ರೂ ನೀವ್ಯಾರು ಕೇಳೋಕೆ ಅಂದಿದ್ದರು. ನಂತರ ಮಾಂಸಾಹರ ಸೇವಿಸಿದ್ದು ನಿಜ ದೇವಸ್ಥಾನದ ಒಳಗೆ ಹೋಗಿಲ್ಲ ಹೊರಗಿನಿಂದಲೇ ಕೈ ಮುಗಿದು ಬಂದಿದ್ದೇನೆ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರಿಗೆ 2 ನಾಲಿಗೆ ಅನ್ನುವುದಕ್ಕೆ ಉದೊಂದು ಉದಾಹರಣೆ ಎಂದು ಗುಡುಗಿದ್ದಾರೆ.

ಬೇರೆಯವರು ಮಾಡಿದರೆ ಹಿಂದೂ ಧರ್ಮದ ವಿರೋಧಿಗಳು ಎಂದು ಬಿಜೆಪಿಯವರು ಆರೋಪಿಸುತ್ತಾರೆ. ಅವರಿಗೊಂದು ನ್ಯಾಯ ಇವರಿಗೊಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.

Home add -Advt

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್*

https://pragati.taskdun.com/bescomengeneerlokayukta-arrrested/

Related Articles

Back to top button