ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾದರು.
ಭೇಟಿ ಬಳಿಕ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿಯಾಗಿ, ಬೆಳಗಾವಿ ಜಿಲ್ಲೆಯ ವಿವಿಧ ಮತಕ್ಷೇತ್ರದ ಪರವಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬರುವ ದಿನಗಳಲ್ಲಿ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ