
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ ಎಂದು ಹೇಳಿದರು. ಗೃಹ ಸಚಿವರಾಗಿರುವ ತಮ್ಮ ಫೋನ್ ಕೂಡ ಕದ್ದಾಲಿಕೆ ಆಗುತ್ತದೆ ಎಂದು ದೂರಿದ್ದಾರೆ.
ಪೆಗಾಸಸ್ ಸ್ಪೈವೇರ್ ಖರೀದಿ ಮತ್ತು ಅದರ ಬಳಕೆಯ ಕುರಿತೂ ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ, ಇದು ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಬಳಸಲಾಗುವ “ಗುಜರಾತ್ ಮಾದರಿ” ಎಂದಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ. ನಿರುದ್ಯೋಗ, ಚೀನಾ, ಪಾಕಿಸ್ತಾನದೊಂದಿಗಿನ ಸಂಬಂಧಗಳ ವೈಫಲ್ಯದಂತಹ ಸಮಸ್ಯೆಗಳನ್ನು ಪ್ರಶ್ನಿಸುವ ವಿರೋಧ ಪಕ್ಷಗಳನ್ನು ಹೆದರಿಸಲು ಮತ್ತು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


