Kannada NewsKarnataka NewsLatestPolitics
*ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ವ್ಯಕ್ತಿ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚ್ಕಿತ್ಸೆ ಕೊಡಿಸುವ ಮೂಲಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾನವೀಯತೆ ಮೆರೆದಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ರಸ್ತೆ ಬದಿ ನರಳಾಡುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಂದಿದ್ದಾರೆ. ರಸ್ತೆ ಬದಿ ಒದ್ದಾಡುತ್ತಿದ್ದ ಗಾಯಾಳುವನ್ನು ಕಂಡು ತಕ್ಷಣ ಚಾಲಕನಿಗೆ ಹೇಳಿ ಕಾರು ನಿಲ್ಲಿಸಿದ್ದಾರೆ. ಸ್ಥಳಕ್ಕಾಗಮಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ತಮ್ಮದೇ ಕಾರಿನಲ್ಲಿ ಗಾಯಾಳುವನ್ನು ಕೂರಿಸಿಕೊಂಡು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ಕೊಡುವಂತೆ ಸೂಚಿಸಿದ್ದಾರೆ. ಸಚಿವರ ಮಾನವೀಯತೆಗೆ ಮೆಚ್ಚುಗೆ ವ್ಯಕ್ತವಾಗಿದೆ.



