Karnataka NewsLatestPolitics

*ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಗೆ ಕೋರ್ಟ್ ರಿಲೀಫ್ ನೀಡಿದೆ.

Home add -Advt

ಬೆಂಗಳೂರಿನ 42 ನೇ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ಇಬ್ಬರಿಗೂ ತಲಾ 10 ಸಾವಿರ ವೈಯಕ್ತಿಯ ಶ್ಯೂರ‍ಿಟಿ ನೀಡುವಂತೆ ಕೋರ್ಟ್ ಸೂಚಿಸಿದೆ.

2025ರ ಅ.14ರಂದು ಆರ್.ಎಸ್.ಎಸ್ ಸದಸ್ಯರ ವಿರುದ್ಧ ಪ್ರಿಯಾಂಕ್ ಖರ್ಗೆ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ ಕೇಳಿಬಂದಿತ್ತು. ಇನ್ನು ಯೂಟ್ಯೂಬ್ ಚಾನಲ್ ಒಂದರಲ್ಲಿ ನಲಪಾಡ್ ಆರ್.ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬೆಂಗಳೂರಿನ ಸಿದ್ದಾಪುರದ ಎ.ತೇಜಸ್ ಎಂಬುವವರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಇಬ್ಬರು ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Related Articles

Back to top button