*ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ ನಾಯಕರ ಬಳಿ ಈಗ ಉತ್ತರವಿದೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಸ್ತಿತ್ವವನ್ನೇ ಕಳೆದುಕೊಂಡಿರುವ ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಪುನಶ್ಚೇತನ ಕಂಡುಕೊಳ್ಳಲಿ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ. ಆದರೆ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ ನಾಯಕರು ಇಗ್ಯಾಕೆ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದರು.
ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಯಡಿಯೂರಪ್ಪ ಎರಡು ಬಾರಿ ರಾಜೀನಾಮೆಯನ್ನೂ ನೀಡಿದ್ದರು. ಇನ್ನು ನನ್ನನ್ನು ಖರ್ಗೆ ಮಗನಾಗಿದ್ದರಿಂದ ರಾಜ್ಯ ರಾಜಕಾರಣದಲ್ಲಿ ಅವಕಾಶಗಳು ಸಿಗುತ್ತಿವೆ ಎನ್ನುತ್ತಾರೆ, ತೇಜಸ್ವಿ ಸೂರ್ಯನಂತವರು ನನ್ನನ್ನು ಕಡೆಗಣನೆಯಿಂದ ಮಾತನಾಡುತ್ತಾದೆ. ನಾವು ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ಧ ಎಂದು ದೊಡ್ಡದಾಗಿ ಹೇಳುವ ಬಿಜೆಪಿ ನಾಯಕರಲ್ಲಿ ಈಗ ಉತ್ತರವಿದೆಯಾ? ಎಂದು ಟಾಂಗ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ