Latest

*ಖರ್ಗೆ ಹತ್ಯೆ ಸಂಚಿನ ಹಿಂದೆ ಬಿಜೆಪಿ, ಆರ್.ಎಸ್.ಎಸ್ ನಾಯಕರ ಕೈವಾಡ; ಪ್ರಿಯಾಂಕ್ ಖರ್ಗೆ ಆರೋಪ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸಂಚಿನ ಹಿಂದೆ ಬಿಜೆಪಿ, ಆರ್.ಎಸ್.ಎಸ್ ನ ಕೆಲ ನಾಯಕರು ಇದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರೊಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆರ್ ಎಸ್ ಎಸ್ ಕಿಂಗ್ ಪಿನ್. ಖರ್ಗೆ ಹತ್ಯೆಗೆ ಸಂಚು ರೂಪಿಸಿರುವವರ ಹಿಂದೆ ಬಿಜೆಪಿ, ಆರ್ ಎಸ್ ಎಸ್ ನ ಕೆಲ ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Home add -Advt

ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಆಗಿದೆ. ರೌಡಿ ಶೀಟರ್ ಮಣಿಕಂಠ ರಾಠೋಡ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿಯವರು ಫೈಟರ್ ರವಿ, ಸೈಲೆಂಟ್ ಸುನೀಲ್ ಇಂತಹವರನ್ನು ಸೇರಿಸಿಕೊಂಡು ರೌಡಿ ಮೋರ್ಚಾ ರಚಿಸಿದ್ದಾರೆ. ಬಿಜೆಪಿಯವರು ರೌಡಿಗಳ ಜೊತೆ ಸೇರಿ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ? ಮಣಿಕಂಠ ರಾಠೋಡ್ ಬೆದರಿಕೆ ಆಡಿಯೋ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸೋಲುವ ಭೀತಿಯಿಂದ ತನಿಖಾ ಸಂಸ್ಥೆಯನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

https://pragati.taskdun.com/umashreefirmaski-stationvidhanasabha-election/


Related Articles

Back to top button