ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ನೂತನ ಸಚಿವ ಪ್ರಿಯಾಂಕ್ ಖರ್ಗೆ, ಈ ಸಮಯದಲ್ಲಿ ಪವರ್ ಶೇರಿಂಗ್ ಚರ್ಚೆ ಅಪ್ರಸ್ತುತ ಎಂದಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್, ಸಿಎಂ ನಿರ್ಧಾರ ಮಾಡ್ತಾರೆ. ಬೇರೆ ಯಾರೂ ಈ ಬಗ್ಗೆ ತೀರ್ಮಾನ ಮಾಡುವುದಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ