ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜು ಕಪನೂರ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಹಾಗಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲೇ ಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಂಕ್ ಖರ್ಗೆ, ಯಾರು ಎಷ್ಟೇ ಚೀರಾಡಲಿ, ಬಟ್ಟೆಯನ್ನು ಬೇಕಾದರೂ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನನ್ನ ರಾಜೀನಾಮೆ ಕೆಳಲು ವಿಜಯೇಂದ್ರ ಸುಪ್ರೀಂ ಕೋರ್ಟಾ? ವಿಜಯೇಂದ್ರ ವಿರುದ್ಧ ಮನಿಲ್ಯಾಂಡರಿಂಗ್ ಕೇಸ್ ದಾಖಲಾಗಿದೆ, ಆದರೂ ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ? ಮೊದಲು ಅವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಗುತ್ತಿಗೆದಾರರನ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ರಾಜು ಕಪನೂರ್ ನನ್ನ ಆಪ್ತ ಅಲ್ಲ. ಯಾವುದಾದರೂ ದಾಖಲೆ ಇದ್ದರೆ ಬಿಜೆಪಿಯವರು ಬಿಡುಗಡೆ ಮಾಡಲಿ. ರಾಜು ಕಪನೂರ್ ಕಾಂಗ್ರೆಸ್ ಸೇರುವ ಮುನ್ನ ಬಿಜೆಪಿಯಲ್ಲಿಯೇ ಇದ್ದರು. ಬಿಜೆಪಿಯ ಎಸ್ ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.
ಕಲಬುರಗಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಎಷ್ಟು ಜನ ಬರ್ತೀರಿ ಎಂದು ಮೊದಲೇ ಹೇಳಿಬಿಡಿ ಅವರಿಗೆ ಟೀ ವ್ಯವಸ್ಥೆ ಮಾಡಿಸುತ್ತೇ. ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡ್ತೀರಾ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ