
ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಫೋಟೋವನ್ನು ತಿರುಚಿ ಹಂಚಿಕೊಂಡಿದ್ದಲ್ಲದೇ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿಂಧನೂರು ತಾಲೂಕಿನ ಹುಡಾ ಗ್ರಾಮದ ನಿವಾಸಿ ಪಂಪೇಶ್ ಪಂಡಿತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ಪಂಪೇಶ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಫೋಟೋಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುಖವನ್ನು ಎಡಿಟ್ ಮಾಡಿ ಅಳವಡಿಸಿ, ತಿರುಚಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಚಿವರ ವಿರುದ್ಧ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ರಾಮಣ್ಣ ಗೋನವಾರ ಎಂಬುವರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



