ಪ್ರಗತಿವಾಹಿನಿ ಸುದ್ದಿ: ರಾಹುಲ್ ಗಾಂಧಿ ರಾಜಿನಾಮೆಯಿಂದ ಕೆರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನ.13 ರಂದು ಉಪ ಚುನಾವಣೆ ನಡೆಯಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕಿಳಿದಿರುವ ಪ್ರಿಯಾಂಕಾ ಗಾಂಧಿ ವಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಳಗ್ಗೆ ವಯನಾಡಿನ ಕಲ್ಪಟ್ಟಾದಿಂದ ರೋಡ್‌ಶೋ ನಡೆಸಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್ ಬರೇಲಿ ಹಾಗೂ ವಾಯನಾಡು ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿಜಯ ಸಾಧಿಸಿದ್ದರು. ರಾಯ್ ಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರದ ಸ್ಥಾನವನ್ನು ಬಿಟ್ಟುಕೊಟ್ಟ ಪರಿಣಾಮವಾಗಿ ತೆರವಾದ ಸ್ಥಾನಕ್ಕೆ ರಾಹುಲ್ ಸಹೋದರಿ ಪ್ರಿಯಾಂಕ ಸ್ಪರ್ಧೆ ಮಾಡುತ್ತಿದ್ದಾರೆ.
ಮಂಗಳವಾರ ಮೈಸೂರು ಮೂಲಕ ಕೇರಳದ ಕಲಪೆಟ್ಟಾಗೆ ತಾಯಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಸಂಜೆ ತೆರಳಿದ್ದರು. ವಯನಾಡಿನಿಂದ ತಮ್ಮ ಚೊಚ್ಚಲ ಚುನಾವಣಾ ಕದನಕ್ಕೆ ಧುಮುಕಲು ಪ್ರಿಯಾಂಕಾ ಅವರೊಂದಿಗೆ ಪತಿ ರಾಬರ್ಟ್ ವಾದ್ರಾ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ