ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾದ್ಯವಾಗಿಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರಪ್ರದೇಶವನ್ನು ತಲುಪಲು ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ಆದರೆ ಅನಾರೋಗ್ಯದಿಂದ ನನ್ನನ್ನು ಇಂದೇ ಆಸ್ಪತ್ರೆಗೆ ದಾಖಲಿಸಬೇಕಾಯಿತು. ಚೇತರಿಸಿಕೊಂಡ ಬಳಿಕ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ. ಚಂದೌಲಿ-ಬನಾರಸ್ ತಲುಪುವ ಎಲ್ಲಾ ಪ್ರಯಾಣಿಕರು, ನನ್ನ ಸಹೋದ್ಯೋಗಿಗಳು ಹಾಗೂ ಪ್ರಯಾಣಕ್ಕಾಗಿ ಶ್ರದ್ಧೆಯಿಂದ ತಯಾರಿ ನಡೆಸುತ್ತಿರುವ ಪ್ರೀತಿಯ ಸಹೋದರನಿಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ