LatestUncategorized

*ರಾಜ್ಯಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳು ಚುನಾವಣೆ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ರಾಜ್ಯ ಕಾಂಗ್ರೆಸ್, ಮಹಿಳೆಯರಿಗಾಗಿ ಇಂದು ಬೃಹತ್ ಸಮಾವೇಶ ಆಯೋಜಿಸಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯಕದರ್ಶಿ ಪ್ರಿಯಾಂಕಾ ಗಾಂಧಿ ಸಮಾವೇಶಕ್ಕೆ ಆಗಮಿಸಿದ್ದಾರೆ.

ನಾ ನಾಯಕಿ ಸಮಾವೇಶ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕಾ ಗಾಂಧಿ ಅವರನ್ನು ಮಾಜಿ ಸಿಎಂ, ವಿಪಕ್ಷ ನಾಯಕ ಸಿದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೊದಲಾದವರು ಸ್ವಾಗತಿಸಿದರು.

Home add -Advt

ಬಳಿಕ ಬೆಂಗಳೂರು ಏರ್ ಪೋರ್ಟ್ ನ ಟೋಲ್ ಗೇಟ್ ಬಳಿ ಪ್ರಿಯಾಂಕಾ ಗಾಂಧಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಸಮಾವೇಶವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದು, ಈ ವೇಳೆ ಮಹಿಳೆಯರಿಗಾಗಿ ವಿಶೇಷ ಪ್ರಣಾಳಿಕೆ ಘೋಷಣೆ ಮಾದಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಪ್ರಿಯಾಂಕಾ ಗಾಂಧಿ ಆಗಮನದಿಂದಾಗಿ ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರಲ್ಲಿ ಸಂಭ್ರಮ, ಉತ್ಸಾಹ ಮನೆ ಮಾಡಿದೆ.

*BREAKING NEWS: ಸ್ಯಾಂಟ್ರೋ ರವಿ ಪ್ರಕರಣ; CIDಗೆ ವರ್ಗಾವಣೆ*

https://pragati.taskdun.com/santro-ravi-casecidhome-miniser-araga-jnanendra/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button