Election NewsPolitics

*ಭೂಮಿ ಇಲ್ಲದವರಿಗೆ ಭೂಮಿ, ರೈತರ ಬೆಳೆಗೆ ಬೆಂಬಲ ಬೆಲೆ, ಮಹಿಳೆಯರಿಗೆ ಮಹಾಲಕ್ಷ್ಮೀ ಯೋಜನೆ ಜಾರಿ; ಪ್ರಿಯಾಂಕಾ ಗಾಂಧಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರೈತರ ಬೆಳೆಗೆ ಬೆಂಬಲ ಬೆಲೆ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಬೆ, ಜಿಎಸ್ ಟಿ ಮುಕ್ತಗೊಳಿಸುತ್ತೇವೆ ಎಂದು ಘೋಷಿಸಿದರು.

ಭೂಮಿ ಇಲ್ಲದವರಿಗೆ ಭೂಮಿ, ಬೆಳೆ ನಷ್ಟವಾದವರಿಗೆ 30 ದಿನಗಳಲ್ಲಿ ವಿಮೆ ಹಣ ಪಾವತಿ, ಮಹಿಳೆಯರಿಗೆ ಗೃಹಲಕ್ಷ್ಮೀ ಜೊತೆಗೆ ಮಹಾಲಕ್ಷ್ಮೀ ಯೋಜನೆ ಜಾರಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ವೇತನ ಹೆಚ್ಚಳ ಮಾಡಲಾಗುವುದು. ಸಂವಿಧಾನ, ರೈತರ ಉಳಿವಿಗಾಗಿ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರರಿಗೆ ನೆರವಾಗಿದೆ. ರಾಜ್ಯದ ಪ್ರತಿಯೊಬ್ಬರೂ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ, ಅಭಿವೃದ್ಧಿ ಕೆಲಸಗಳ ಮೇಲೆ ಚುನಾವಣೆ ಮಾಡುವುದು ಬಿಟ್ಟು ಜನರ ಭಾವನೆಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ ಬರದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬರ ಪರಿಗಾರಕ್ಕಾಗಿ ಸಿದರಾಮಯ್ಯ ನೇತೃತ್ವದ ಸರ್ಕಾರ ಹಲವು ಬಾರಿ ಪ್ರಧಾನಿ ಮೋದಿಗೆ ಮನವಿ ಮಾಡಿದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ. ಕಳೆದ 45 ವರ್ಷಗಳಲ್ಲಿ ಇರದ ನಿರುದ್ಯೋಗ ಈಗ ಸೃಷ್ಟಿಯಾಗಿದೆ. ವರ್ಷಕ್ಕೆ 2 ಕೋಟಿ ಕೆಲಸ ಕೊಡುತ್ತೇವೆ, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದವರು ಹತ್ತು ವರ್ಷಕಳೆದರೂ ಏನೂ ಮಾಡಿಲ್ಲ. ಕೇವಲ ಸುಳ್ಳು ಭರವಸೆ ಕೊಟ್ಟು ಓಡಾಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ಥರವಾಗಿದೆ ಎಂದು ಕಿಡಿಕಾರಿದರು.

Related Articles

Back to top button