Latest

ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸತ್ಯಾಗ್ರಹ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಇಡಿ ಕಚೇರಿಗೆ ತೆರಳುವ ಮಾರ್ಗದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ತುಘಲಕ್ ರಸ್ತೆಯಲ್ಲಿರುವ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯುತ್ತಿದ್ದಂತೆ ತುಘಲಕ್ ರಸ್ತೆಯಲ್ಲಿನ ಪೊಲೀಸ್ ಠಾಣೆಗೆ ಧಾವಿಸಿದ ಪ್ರಿಯಾಂಕಾ ಗಾಂಧಿಯವರನ್ನು ಕುದ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಕೂರಿಸಿದ್ದಾರೆ. ಇದರಿಂದ ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಠಾಣೆಯಲ್ಲಿಯೇ ರಘುಪತಿ ರಾಘವ ರಾಜಾರಾಮ್ ಹಾಡು ಹಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಶ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಲಾಲ್ ಬಾಗ್ ಮುಖ್ಯದ್ವಾರದಿಂದ ಪ್ರತಿಭಟನಾ ರ್ಯಾಲಿ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ED ಕಚೇರಿಗೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

Home add -Advt

Related Articles

Back to top button