
ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕೆ ಶಾಸಕರ ನಿಧಿ ಚೆಕ್ ಹಸ್ತಾಂತರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯಿಂದ ಚೆಕ್ ಗಳನ್ನು ಹಸ್ತಾಂತರಿಸಿದರು.

ನಂತರ ಮಾಸ್ತಮರ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕೂಡ 3 ಲಕ್ಷ ರೂ.ಗಳ ಚೆಕ್ ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಲಾಯಿತು.
ಜಾತ್ರೆ, ಪುರಾಣ, ಪ್ರವಚನಗಳ ಮೂಲಕ ಸಮಾಜಕ್ಕೆ ಉತ್ತಮವಾದ ಸಂಸ್ಕಾರವನ್ನು ಕಲಿಸಿ ಕೊಡುವುದರಲ್ಲಿ ದೇವಸ್ಥಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ.
ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ ಬೆಳೆಸಬೇಕು ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.
ಹಳ್ಳಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಪರ ಮನೋಭಾವ ಬೆಳೆಯಬೇಕು. ಚುನಾವಣೆ ವೇಳೆ ರಾಜಕೀಯವಿದ್ದರೂ ಅಭಿವೃದ್ಧಿ ವಿಷಯದಲ್ಲಿ ಅದನ್ನು ಮೀರಿ ಸಹಕರಿಸಬೇಕು. ಎಲ್ಲರ ಸಹಕಾರವಿದ್ದಾಗ ಶಾಸಕನಾಗಿ ನನಗೂ ಹೆಚ್ಚು ಹೆಚ್ಚು ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಕ್ಷೇತ್ರದಲ್ಲಿ ಅಂತಹ ಬದಲಾವಣೆ ಬರುತ್ತಿದ್ದು, ಎಲ್ಲರೂ ಪಕ್ಷ ಭೇದ ಮರೆತು ನನ್ನೊಂದಿಗೆ ಸಹಕರಿಸುತ್ತಿದ್ದಾರೆ. ಇದು ನನಗೆ ಖುಷಿ ತಂದಿದೆ. ಹಾಗಾಗಿಯೇ ಕಳೆದ 2 ವರ್ಷದಲ್ಲಿ ಕ್ಷೇತ್ರ ಎಂದೂ ಕಂಡರಿಯದಷ್ಟು ಅಭಿವೃದ್ಧಿ ಯೋಜನೆಗಳನ್ನು ತರಲುಸಾಧ್ಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.