ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳೂ, ಭಾಷಾಶಾಸ್ತ್ರಜ್ಞರೂ ಆದ ಪ್ರೊ: ಎಚ್.ಎಂ.ಮಹೇಶ್ವರಯ್ಯ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಮೂಲತಃ ಶಿವಮೊಗ್ಗದವರಾಗಿದ್ದ ಮಹೇಶ್ವರಯ್ಯ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರ ಇದ್ದಾರೆ.
ಮಹೇಶ್ವರಯ್ಯ ಅವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಆತ್ಮೀಯರಾಗಿದ್ದ ಡಾ. ಮಹೇಶ್ವರಯ್ಯ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ನಂತರ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದರು. ಅತ್ಯಂತ ಕ್ರೀಯಾಶೀಲ ಪ್ರಾಧ್ಯಾಪಕರಾಗಿದ್ದ ಮಹೇಶ್ವರಯ್ಯ ಇವರ ನಿಧನದಿಂದ ನಾಡಿನ ಭಾಷಾಶಾಸ್ತ್ರಕ್ಕೆ ದೊಡ್ಡ ನಷ್ಟವಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬ ಮತ್ತು ವಿದ್ಯಾರ್ಥಿ ಬಳಗಕ್ಕೆ ನೀಡಲಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
2 ದಿನದಲ್ಲಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟ; ಕೆಲವು ಶಿಕ್ಷಕರಿಗೆ ವರ್ಕ್ ಫ್ರಾಂ ಹೋಮ್ ಸೌಲಭ್ಯ
ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್; ಯಾವುದು ಲಭ್ಯ? ಯಾವುದು ಅಲಭ್ಯ?
ಶಿಕ್ಷಕರಿಗೆ ರಜೆ ವಿಸ್ತರಣೆ: ನಾಳೆ ಸಂಜೆಯೊಳಗೆ ಆದೇಶ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ