Latest

ಪ್ರೊ.ಕೆ.ಎಸ್.ನಾರಾಯಣಾಚಾರ್ಯ ಇನ್ನಿಲ್ಲ

ಬೆಂಗಳೂರು:   ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್.ನಾರಾಯಣಾಚಾರ್ಯ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಲೇಖಕರು, ಪಂಡಿತರು, ವಾಗ್ಮಿಗಳೂ ಆಗಿದ್ದ ಅವರು  ಧರ್ಮಶಾಸ್ತ್ರ ಪ್ರಚಾರದ ಮೂಲಕ ಖ್ಯಾತಿ ಗಳಿಸಿದ್ದರು. ಶುಕ್ರವಾರ ಬೆಳಗಿನ ಜಾವ 2 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ(1954), ಬಿ.ಎ(ಆನರ್ಸ್)(1957), ಎಂ.ಎ(ಇಂಗ್ಲಿಷ್)(1958) ಪದವಿಗಳನ್ನು ಪಡೆದಿದ್ದರು.

ವೇದ ಸಂಸ್ಕೃತಿಯ ಪರಿಚಯ, ಶ್ರೀ ರಾಮಾವತಾರ ಸಂಪೂರ್ಣವಾದಾ, ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ.
‘ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ಅವರಿಗೆ ದೊರೆತಿದ್ದವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button