Kannada NewsKarnataka NewsLatest
*ಪಾಕಿಸ್ತಾನ ಪರ ಘೋಷಣೆ ಪ್ರಕರಣ; ಓರ್ವ ಆರೋಪಿ ಪೊಲೀಸ್ ಕಸ್ಟಡಿಗೆ, ಇಬ್ಬರು ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಹಾಗೂ ಓರ್ವ ಆರೋಪಿಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ಇಂದು ಬೆಂಗಳುರಿನ 39ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಕೋರ್ಟ್ ಆರೋಪಿ ಮೊಹಮ್ಮದ್ ನಾಶಿಪುಡಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.
ಅಲ್ಲದೇ ಉಳಿದ ಇಬ್ಬರು ಆರೋಪಿಗಳಾದ ಮುನಾವರ್ ಹಾಗೂ ಇಲ್ತಾಜ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.