
ಪ್ರಗತಿವಾಹಿನಿ ಸುದ್ದಿ; ಉಡುಪಿ: ಚಿತ್ರರಂಗದಲ್ಲಿ ಹಣ ಹೂಡಿಕೆ ಮಾಡಿದ್ದ ನಿರ್ಮಾಪಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ.
ನಾಗೇಶ್ ಕುಮಾರ್ (64) ನೇಣಿಗೆ ಶರಣಾದ ನಿರ್ಮಾಪಕ. ಮೃತ ನಾಗೇಶ್ ಕುಮಾರ್ ‘ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೀಜಾಡಿ ಗ್ರಾಮದ ಲಕ್ಷ್ಮೀ ಗ್ಲಾಸ್ ಪ್ಲೈವುಡ್ ಅಂಗಡಿ ಹೊರಗಡೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾಗೇಶ್ ಡೆತ್‍ನೋಟ್ ಬರೆದಿಟ್ಟಿದ್ದು, ಅದರಲ್ಲಿ ನನ್ನನ್ನು ಕ್ಷಮಿಸಿ. ಎಲ್ಲರಿಗೂ ಒಳ್ಳೆಯದಾಗಲಿ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ.
ಕೊರೋನಾ ಲಾಕ್‍ಡೌನ್, ಆರ್ಥಿಕ ನಷ್ಟದಿಂದ ನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ