Latest

ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ಜೇಮ್ಸ್ ಸಿನಿಮಾ ನಿರ್ಮಾಪಕ ಕಿಶೋರ್ ಪತ್ತಿಕೊಂಡ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ವಿಜಯನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ನಿರ್ನಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ನಿನ್ನೆ ಬೆಳಿಗ್ಗೆಯೇ ಅವರಿಗೆ ಸ್ಟ್ರೋಕ್ ಆಗಿದ್ದು, ಯಾರ ಫೋನಿಗೂ ಸಿಕ್ಕಿರಲಿಲ್ಲ. ಇದರಿಂದ ಗಾಬರಿಯಾದ ಕುಟುಂಬ ಸದಸ್ಯರು ಸ್ನೇಹಿತರಿಗೆ ತಿಳಿಸಿದ್ದಾರೆ. ನಿನ್ನೆ ಸಂಜೆ ಮನೆ ಬಾಗಿಲು ಒಡೆದು ನೋಡಿದಾಗ ಕಿಶೋರ್ ಅನಾರೋಗ್ಯದಿಂದ ಬಳಲುತ್ತಿರುವುದು ಗೊತ್ತಾಗಿದೆ.

ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈಬಿಪಿಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಟ್ರೋಕ್ ಸಂಭವಿಸಿದೆ ಎನ್ನಲಾಗಿದೆ. ತಡರಾತ್ರಿ ಕಿಶೋರ್ ಅವರಿಗೆ ಆಪರೇಶನ್ ಮಾದಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button