ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮವನ್ನು ಕೆಎಲ್‌ಇ-ಜೀರಗೆ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಎಂ. ಬಿ. ಬೋರಲಿಂಗಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ರಕ್ಷಣೆ, ಪೋಕ್ಸೊ ಕಾಯ್ದೆ ಹಾಗೂ ಇತ್ತೀಚೆಗೆ ಮಕ್ಕಳ ಕಳ್ಳರ ಕುರಿತು ಪ್ರಸಾರವಾಗುತ್ತಿರುವ ಸುದ್ದಿಗಳು ಇದರೊಂದಿಗೆ ಇನ್ನಿತರ ಅಪರಾಧಗಳಿಂದ ಮಕ್ಕಳ ಸುರಕ್ಷತೆ ಮತ್ತು ಪಾಲಕರ, ಶಿಕ್ಷಕರ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಗಳ ಕುರಿತು ತಿಳಿಹೇಳಿದರು.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಗಾಳಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಶಿವಾನಂದ ಮಾಸ್ತಿಹೊಳಿ ಮಕ್ಕಳ ಆರೋಗ್ಯ ಹಾಗೂ ಶುಚಿತ್ವದ ಕುರಿತು ಮಾತನಾಡಿದರು.
ಡಿಡಿಪಿಐ ಬಸವರಾಜ ನಲತವಾಡ, ಬಿಇಒ ವೈ. ಜೆ. ಭಜಂತ್ರಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಕುರಿತು ಮುಖ್ಯೋಪಾಧ್ಯಾಯರು ಕೈಗೊಳ್ಳಬೇಕಾದ ಕ್ರಮಗಳ ಕುರಿತು, ಕೆಎಸ್‌ಆರ್‌ಟಿಸಿ ಡಿಸಿ ಪಿ. ವೈ. ನಾಯ್ಕ, ಆರ್‌ಟಿಓ ಶಿವಾನಂದ ಮಗದುಮ್ ರಸ್ತೆ ಸುರಕ್ಷತೆ ಮತ್ತು ನಿಯಮ ಪಾಲನೆಗಳಲ್ಲಿ ಮಕ್ಕಳಿಗೆ ಮೂಡಿಸಬೇಕಾದ ಅರಿವುಗಳ ಕುರಿತು ಹಾಗೂ ಪಾಲಕರ ಮತ್ತು ಶಿಕ್ಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು.
ಡಿಸಿಪಿ (ಅಪರಾಧ ಮತ್ತು ಸಂಚಾರ) ಮತ್ತು ವಿಶೇಷ ಮಕ್ಕಳ ಕಲ್ಯಾಣ ಘಟಕ,ನೋಡಲ್ ಅಧಿಕಾರಿ ಸ್ನೇಹ ಪಿ.ವಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಶಿಕ್ಷಣ ಇಲಾಖೆಗೆ ಸಂಬಂಧಿತ ಸಮಸ್ಯೆಗಳು ಹಾಗೂ ಆರೋಗ್ಯ ಇಲಾಖೆಗೆ ಸಂಬಂಧಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬ್ಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಕ್ಷಣಾ ಘಟಕದ ಅಧಿಕಾರಿ ಜೆ. ಟಿ ಲೋಕೇಶ ಮತ್ತು ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಕೆಎಸ್‌ಆರ್‌ಟಿಸಿ ಇಲಾಖೆಗಳ ನಗರ /ತಾಲೂಕು ಮಟ್ಟದ ಮುಖ್ಯಸ್ಥರು, ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಸರಕಾರಿ, ಅನುದಾನಿತ ಅನುದಾನ ರಹಿತ ಎಲ್ಲ ಶಾಲಾ ಮುಖ್ಯ ಶಿಕ್ಷಕರು, ಬೆಳಗಾವಿ ನಗರದ ಎಲ್ಲ ಎಸಿಪಿ, ಪಿಐ, ಪಿಎಸ್‌ಐ ಮತ್ತು ಎಲ್ಲ ಪೊಲೀಸ್ ಠಾಣೆಯ ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಪಿಎಂ ಕೇರ್ಸ್ ಫಂಡ್ ಗೆ ರತನ್ ಟಾಟಾ ಟ್ರಸ್ಟಿ, ಕನ್ನಡತಿ ಸುಧಾ ಮೂರ್ತಿ ಸಲಹಾ ಸಮಿತಿಗೆ ನೇಮಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ