CrimeKannada NewsKarnataka News

*ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ: ನಿಷೇಧಿತ ವಸ್ತುಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ತಡರಾತ್ರಿ ಕಾರಾಗೃಹ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಚಾನಕ್ ತಪಾಸಣೆ ನಡೆಸಿದ್ದು ಈ ವೇಳೆ ಕೈದಿಗಳ ಬಳಿಯಿದ್ದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಪೊಲೀಸ್‌ ತಪಾಸಣೆಯ ವೇಳೆ 2 ಮೊಬೈಲ್ ಫೋನ್‌ಗಳು, 1 ಸಿಮ್ ಕಾರ್ಡ್ ಹಾಗೂ 1 ಕೇಬಲ್ ರಹಿತ ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ. ಕಾರಾಗೃಹ ಆವರಣದಲ್ಲಿ ಮೊಬೈಲ್ ಬಳಕೆ ಕಟ್ಟುನಿಟ್ಟಾಗಿ ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಸಂಪೂರ್ಣ ವಿವರವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರಿಗೆ ವರದಿ ಮಾಡಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ಮಾಹಿತಿ ನೀಡಿದ್ದಾರೆ.

Home add -Advt

Related Articles

Back to top button