ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ:
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಾದ್ಯಂತ ಮಾ.೨೫ ರಿಂದ ಏ.೬ ರವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವಾರ್ಷಿಕ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ.
ಪರೀಕ್ಷೆಗಳ ಸಮಯದಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಹಾಗೂ ಯಾವುದೇ ರೀತಿಯ ಅವ್ಯವಹಾರಗಳು ಜರುಗದಂತೆ ಕಟ್ಟುನಿಟಿನ ಕ್ರಮ ಜರುಗಿಸುವ ಸಲುವಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ೨೦೦ಮೀ. ವ್ಯಾಪ್ತಿಯ ಸುತ್ತಮುತ್ತ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿರುತ್ತದೆ.
ಸದರಿ ಆದೇಶವನ್ನು ಉಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ