Belagavi NewsBelgaum NewsElection NewsKannada NewsKarnataka NewsNational

*ಶಸ್ತ್ರಾಸ್ತ್ರ ಜೊತೆಗಿಟ್ಟುಕೊಂಡು ತಿರುಗಾಡುವುದು ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳ ಆಯ್ಕೆಯ ಉಪಚುನಾವಣೆ ನ.23 ರಂದು ಜರುಗಲಿದೆ.

ಈ ಹಿನ್ನೆಲೆಯಲ್ಲಿ ಚುನಾವಣೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಕ್ತ ಮತದಾನ ನಡೆಸಲು ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ,1959 ರಡಿ ಸಂಕೇಶ್ವರ ಪುರಸಭೆ, ನಿಪ್ಪಾಣಿ ನಗರಸಭೆ, ನಾಗನೂರ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣೆಯ ಸಮಯದಲ್ಲಿ ಲೈಸೆನ್ಸ್‌ದಾರರು ಆಯುಧ ಅಥವಾ ಶಸ್ತ್ರಾಸ್ತ್ರಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಪ್ರಕ್ರಿಯೆ ಸಂಹಿತರ ಕಾಯ್ದೆ, 1973 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ, 1951 ರ ಕೆಳಗೆ ದಂಡನೆಗೆ ಗುರಿಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button