Kannada NewsKarnataka NewsLatest

ಜುಲೈ 19 ಹಾಗೂ 22ರಂದು ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರದ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜು. ೧೯ ರಿಂದ ಜು. ೨೨ ರಂದು ಮುಂಜಾನೆ ೦೯ ಗಂಟೆಯಿಂದ ಸಾಯಂಕಾಲ ೬ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲು ೨೦೦ ಮೀಟರ್ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಾದ ಡಾ ಕೆ.ತ್ಯಾಗರಾಜನ್ ಆದೇಶ ಹೊರಡಿಸಿರುತ್ತಾರೆ.

ನಿಷೇಧಾಜ್ಞೆ ಜಾರಿ ಪ್ರದೇಶದಲ್ಲಿ ಸಿ.ಆರ‍್ಪಿ.ಸಿ ಕಲಂ ೧೪೪ ರ ಪ್ರಕಾರ ಈ ಕೆಳಕಂಡ ಷರತ್ತುಗಳನ್ನು ವಿಧಿಸಲಾಗಿದೆ:
ಕೊವಿಡ್-೧೯ ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾಗಿರುವ ಕೊವಿಡ್-೧೯ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ೨೦೦ ಮೀಟರ್ ಸುತ್ತಳತೆಯಲ್ಲಿ ಪರೀಕ್ಷಾರ್ಥಿಗಳು ಶಾಲಾ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ ಕೇಂದ್ರ/ ಕಂಪ್ಯೂಟರ್/ ಸೈಬರ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚುವುದು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ/ ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಹಾಗೂ ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲು ಶಸ್ತ್ರ, ಬಡಿಗೆ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲಿನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಧ್ವನಿವರ್ಧಕಗಳನ್ನು ಉಪಯೋಗಿಸುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಅಂತ್ಯಕ್ರಿಯೆ ಮೆರವಣ ಗೆಗಳಿಗೆ ಮತ್ತು ಮದುವೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಧಾರ್ಮಿಕ ಮೆರವಣ ಗೆಗಳಿಗೆ ಈ ಆಜ್ಞೆಯು ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.
ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಾದ ಡಾ. ಕೆ.ತ್ಯಾಗರಾಜನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ

ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜು. ೧೯ ರಿಂದ ಜು. ೨೨ ರಂದು ಬೆಳಿಗ್ಗೆ ೧೦.೧೫ ಗಂಟೆಯಿಂದ ೧.೪೫ ಹಾಗೂ ೨.೧೫ ರಿಂದ ೫.೩೦ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲು ೨೦೦ ಮೀಟರ್ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ. ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಕಲಂ ೧೪೪ ರ ಪ್ರಕಾರ ಈ ಕೆಳಕಂಡ ಷರತ್ತುಗಳನ್ನು ವಿಧಿಸಲಾಗಿದೆ:
ನಿಷೇಧಾಜ್ಞೆ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಿ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಹತ್ತಿರ ಬರುವುದು, ಸಾರ್ವಜನಿಕ ಸಭೆ, ಮೆರವಣ ಗೆ ಮಾಡುವುದು. (ಶವ ಸಂಸ್ಕಾರ ಮತ್ತು ಮದುವೆ ಮೆರವಣ ಗೆಗಳನ್ನು ಹೊರತುಪಡಿಸಿ)
ನಿಷೇಧಾಜ್ಞೆ ಅವಧಿಯಲ್ಲಿ ಆಯುಧ, ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದು, ಯಾವುದೇ ರೀತಿಯ ಫಟಾಕಿ/ಸಿಡಿಮದ್ದು ಸಿಡಿಸುವದನ್ನು ಹಾಗೂ ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದು.
ನಿಷೇಧಾಜ್ಞೆ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ೨೦೦ ಮೀ, ಒಳಗಿನ ಝರಾಕ್ಸ್ ಅಂಗಡಿಗಳನ್ನು ಬಂದ ಮಾಡುವುದು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಶಾಲಾ ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಅಂತ್ಯಕ್ರಿಯೆ ಮೆರವಣ ಗೆಗಳಿಗೆ ಮತ್ತು ಮದುವೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಧಾರ್ಮಿಕ ಮೆರವಣ ಗೆಗಳಿಗೆ ಈ ಆಜ್ಞೆಯು ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.
ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ. ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.

ಗೋಕಾಕ ಫಾಲ್ಸ್ ಸೇರಿದಂತೆ ಮೂರು ಫಾಲ್ಸ್ ಗಳಿಗೆ ಪ್ರವಾಸಕ್ಕೆ ತಡೆ – ಡಿಸಿ ಆದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button