
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಫೆ.01 ರಿಂದ 7ರ ವರೆಗೆ ಶಿವಬಸವ ನಗರದ ಆರ್.ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ಮತ್ತು ಎಸ್.ಎಸ್ ಪದವಿ ಪೂರ್ವ ಕಾಲೇಜ್ ಎರಡು ಪರೀಕ್ಷಾ ಕೇಂದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಗಣಕಯಂತ್ರ ಶಿಕ್ಷಣ ಥಿಯರಿ ಮತ್ತು ಪ್ರಾಯೋಗಿಕ ಮುಖ್ಯ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ವೇಳೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
