Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ನಿಷೇದಾಜ್ಞೆ ಜಾರಿ: ಡಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ 2026 ರ ಮಾರ್ಚ & ಎಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿರುತ್ತಾರೆ.

ಪರೀಕ್ಷೆ-1 ಗಳು ದಿನಾಂಕ: 18.03.2026 ರಿಂದ ದಿನಾಂಕ:02.04.2026 ರವರೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 131 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಪರೀಕ್ಷಾ ಕೇಂದ್ರಗಳಲ್ಲಿ ಹೀಗೆ ಬೆಳಗಾವಿ ಜಿಲ್ಲೆಯಾದ್ಯಂತ ಒಟ್ಟು 235 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 235 ಪರೀಕ್ಷಾ ಕೇಂದ್ರಗಳಲ್ಲಿ ಜರುಗುವ ಪ್ರಯುಕ್ತ, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಅನ್ವಯ ಸದರಿ ಪರೀಕ್ಷೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶದಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button