
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಇವರ ವತಿಯಿಂದ 2024-25 ನೇ ಸಾಲಿನ ಆದರ್ಶ ವಿದ್ಯಾಲಯಗಳ 6 ನೇ ತರಗತಿ ದಾಖಲಾತಿಗಾಗಿ ನಡೆಯುವ ಪರೀಕ್ಷೆಗಾಗಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ದಿನಾಂಕ:23.03.2025 ರಂದು ಭಾನುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿರುವ ಪ್ರವೇಶ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿ.ಎನ್.ಎಸ್.ಎಸ್ ಕಲಂ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.