ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ವಿವಾಹದ ನೆಪದಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ವ್ಯಕ್ತಿಯನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.
ವಿವಾಹಿತ ಮಹಿಳೆ ಸ್ವಯಂಪ್ರೇರಣೆಯಿಂದ ಪುರುಷನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಕಾನೂನುಬದ್ಧ ವಿವಾಹವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿದಿದ್ದ ನ್ಯಾಯಾಲಯ, ಇದು ಅತ್ಯಾಚಾರಕ್ಕೆ ಸಮಾನವಾಗುವುದಿಲ್ಲ ಎಂದು ಹೇಳಿದೆ.
2018 ರಲ್ಲಿ ಕೊಲ್ಲಂ ಜಿಲ್ಲೆಯಲ್ಲಿ ಪೊಲೀಸರು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕ ಪೀಠ ರದ್ದುಗೊಳಿಸಿತು. ಮಹಿಳೆಗೆ ಪುರುಷನೊಂದಿಗೆ ತನ್ನ ಕಾನೂನುಬದ್ಧ ವಿವಾಹ ಸಾಧ್ಯವಿಲ್ಲ ಎಂಬ ಅರಿವಿದ್ದರೂ ಆಕೆ ಆತನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಅದು ಅತ್ಯಾಚಾರವಾಗುವುದಿಲ್ಲ ಎಂದು ಕೋರ್ಟ್ ಹೇಳಿತು.
ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಪರಿಪೂರ್ಣವಲ್ಲ: ಸಿಜೆಐ ಡಿ.ವೈ. ಚಂದ್ರಚೂಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ