CrimeKannada NewsKarnataka News

*BREAKING: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮನ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು, ಅಣ್ಣನೇ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ತಮ್ಮ ರಘುಗೆ ಅಣ್ಣ ದೇವರಾಜ್ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ರಘು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ ಜಮೀನಿನಲ್ಲಿ ಪಡಿತರ ವಿಚಾರಕ್ಕೆ ಹಾಗೂ ಆಸ್ತಿ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ಕೋಪಗೊಂಡ ದೇವರಾಜ್, ತಮ್ಮ ರಘು ಮೇಲೆ ಮಾರಣಂತಿಕವಾಗಿ ದಾಳಿ ನಡೆಸಿ ಚಾಕು ಇರಿದಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ರಘುನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರಘು ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾನೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button