ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಗಲಭೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧರಿಸಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಗಲಭೆಯಲ್ಲಿ ಆಗಿರುವ ಆಸ್ತಿ ನಷ್ಟವನ್ನು ಸುಪ್ರಿಂ ಕೋರ್ಟ್ ಆದೇಶದಂತೆ ಗಲಭೆಕೋರರಿಂದಲೇ ವಸೂಲು ಮಾಡಲಾಗುವುದು ಎಂದು ತಿಳಿಸಿದರು.
ಈ ಮಧ್ಯೆ ತಮ್ಮ ಮನೆಗೆ ಬೆಂಕಿ ಹಚ್ಚಿ, ಲೂಟಿ ಮಾಡಿದವರ ವಿರುದ್ಧ ದೂರು ನೀಡುವುದಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.
ನಾನು ದೇವರ ಮೇಲೆ ಭಾರ ಹಾಕುತ್ತೇನೆ. ಯಾರ ವಿರುದ್ಧವೂ ದೂರು ನೀಡುವುದಿಲ್ಲ ಎಂದರು. ಶ್ರೀನಿವಾಸ ಮೂರ್ತಿಯವರ ಮನೆಯಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಭಾರಿ ಪ್ರಮಾಣದಲ್ಲಿ ನಗದು ಲೂಟಿಯಾಗಿದೆ ಎನ್ನಲಾಗಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಲಭೆ ಪೀಡಿಯ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಈಗಾಗಲೆ ವರದಿಯಾಗಿರುವಂತೆ ಗಲಭೆ ವೇಳೆ ಪೊಲೀಸ್ ಫೈರಿಂಗ್ ನಿಂದ ಮೂವರು ದುಷ್ಕರ್ಮಿಗಳು ಸಾವಿಗೀಡಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ