Latest

ಪೋಲಿಯೋ ಡ್ರಾಪ್ ಬದಲು ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ; ಯಾವತ್ಮಲ್: ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಇಲ್ಲಿನ ಯಾವತ್ಮಲ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮಕ್ಕಳೂ ಆರೋಗ್ಯದಿಂದ ಇದ್ದಾರೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ ತನಕ್ಕೆ ಆರೋಗ್ಯ ಸಿಬ್ಬಂದಿ, ವೈದ್ಯ ಹಾಗೂ ಆಶಾ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗುವುದು ಎಂದು ಯಾವತ್ಮಲ್ ಜಿಲ್ಲಾ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

 

Home add -Advt

Related Articles

Back to top button