GIT add 2024-1
Laxmi Tai add
Beereshwara 33

*ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ; ತಾಯಿ ಸೇರಿದಂತೆ ನಾಲ್ವರಿಗೆ ಶಿಕ್ಷೆ ಪ್ರಮಾಣ ಪ್ರಕಟ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಸೇರಿದಂತೆ ನಾಲ್ವವರು ಅಪರಾಧಿಗಳಿಗೆ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಸಂತ್ರಸ್ತ ಬಾಲಕಿಯ ತಾಯಿ ಗೀತಾ ಹಾಗೂ ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿ ಗೆ 20 ವರ್ಷ ಜೈಲು ಶಿಕ್ಷೆ ಹಾಗೂ ತಲಾ 25 ಸಾವಿರ ದಂಡ ವಿಧಿಸಿದೆ. ನ್ಯಾಯಮೂರ್ತಿ ಶಾಂತಣ್ಣ ಆಳ್ವ ಈ ತೀರ್ಪು ಪ್ರಕಟಿಸಿದ್ದಾರೆ.

ಹಣಕ್ಕಾಗಿ ಹೆತ್ತ ತಾಯಿ ಗೀತಾ ತನ್ನ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆ ದಂಧೆಗೆ ನೂಕಿದ್ದಳು. 2020ರ ಸೆಪ್ಟೆಂಬರ್ 1ರಿಂದ 2021ರ ಜನವರಿ 27ರವ್ವರೆಗೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆದಿತ್ತು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪದ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ 2021ರಲ್ಲಿ ಪೊಲೀಸರು ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದರು.

Emergency Service

ಪ್ರಕರಣ ಸಂಬಂಧ 53 ಜನರನ್ನು ಪೊಲೀಸರು ಬಂಧಿಸಿದ್ದರು. ಅವರಲ್ಲಿ ಸಂತ್ರಸ್ತ ಬಾಲಕಿ ತಾಯಿ ಸೇರಿ ನಾಲ್ವರು ಅಪರಾಧಿಗಳು ಎಂದು ಇತ್ತೀಚೆಗೆ ಕೋರ್ಟ್ ಆದೇಶ ನೀಡಿತ್ತು. ಇದೀಗ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿರುವ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.


Bottom Add3
Bottom Ad 2