
ಪ್ರಗತಿವಾಹಿನಿ ಸುದ್ದಿ: ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸುತ್ತಿದ್ದ ಬಾಗಲಕೋಟೆಯ ಮುಧೋಳದ ನಾನಾ ಲಾಡ್ಜ್‌ಗಳ ಮೇಲೆ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದು, 10 ಯುವತಿಯರನ್ನು ರಕ್ಷಿಸಿದ್ದಾರೆ.
ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ ಮತ್ತು ಕರ್ನಾಟಕ ಮೂಲದ ಹುಡುಗಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಸುರಭಿ, ಸಪ್ತಗಿರಿ, ಓಂಕಾರ, ಶಿವದುರ್ಗಾ ಲಾಡ್ಜ್‌ಗಳಲ್ಲಿ ಈ ಯುವತಿಯರು ಸಿಕ್ಕಿಹಾಕಿಕೊಂಡಿದ್ದರು. ಸ್ಪಾ ಹೆಸರಿನಲ್ಲಿ ಈ ಯುವತಿಯರನ್ನು ಕರೆ ತಂದು ವೇಶ್ಯಾವಾಟಿಗೆ ಬಳಸಲು ಯೋಜಿಸಲಾಗಿತ್ತು ಎಂದು ತಿಳಿದು ಬಂದಿದೆ.
ಈ ಸಂಬಂಧ ಮುಧೋಳ ಠಾಣೆಯಲ್ಲಿ 11 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ಶೆಟ್ಟಿ ಬಹುಮಾನ ಘೋಷಿಸಿದ್ದಾರೆ. ಸಾರ್ವಜನಿಕ ವಲಯದಲ್ಲೂ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ