Kannada NewsKarnataka NewsNational

*ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 10 ಯುವತಿಯರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸುತ್ತಿದ್ದ ಬಾಗಲಕೋಟೆಯ ಮುಧೋಳದ ನಾನಾ ಲಾಡ್ಜ್‌ಗಳ ಮೇಲೆ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದು, 10 ಯುವತಿಯರನ್ನು ರಕ್ಷಿಸಿದ್ದಾರೆ.

Home add -Advt

ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ ಮತ್ತು ಕರ್ನಾಟಕ ಮೂಲದ ಹುಡುಗಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಸುರಭಿ, ಸಪ್ತಗಿರಿ, ಓಂಕಾರ, ಶಿವದುರ್ಗಾ ಲಾಡ್ಜ್‌ಗಳಲ್ಲಿ ಈ ಯುವತಿಯರು ಸಿಕ್ಕಿಹಾಕಿಕೊಂಡಿದ್ದರು. ಸ್ಪಾ ಹೆಸರಿನಲ್ಲಿ ಈ ಯುವತಿಯರನ್ನು ಕರೆ ತಂದು ವೇಶ್ಯಾವಾಟಿಗೆ ಬಳಸಲು ಯೋಜಿಸಲಾಗಿತ್ತು ಎಂದು ತಿಳಿದು ಬಂದಿದೆ.

ಈ ಸಂಬಂಧ ಮುಧೋಳ ಠಾಣೆಯಲ್ಲಿ 11 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ಶೆಟ್ಟಿ ಬಹುಮಾನ ಘೋಷಿಸಿದ್ದಾರೆ. ಸಾರ್ವಜನಿಕ ವಲಯದಲ್ಲೂ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Related Articles

Back to top button