ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮಾಡುವ ಮೂಲಕ ಭಿಕ್ಷಾಟನೆ ಮಾಡುತ್ತಿದ್ದ 47 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
1 ತಿಂಗಳಿಂದ 12 ತಿಂಗಳು ವಯಸ್ಸಿನ 4 ಗಂಡು ಹಾಗೂ 2 ಹೆಣ್ಣು ಸೇರಿದಂತೆ 6 ಮಕ್ಕಳು, 1-3 ವರ್ಷದ ಒಳಗಡೆ ಇರುವ 6 ಗಂಡು ಮತ್ತು 6 ಹೆಣ್ಣು ಸೇರಿದಂತೆ 12 ಮಕ್ಕಳ, 3-6 ವರ್ಷ ವಯಸ್ಸಿನ 4 ಹೆಣ್ಣು ಮತ್ತು 2 ಗಂಡು ಸೇರಿದಂತೆ 6 ಮಕ್ಕಳು ಮತ್ತು 6 ವರ್ಷ ಮೇಲ್ಪಟ್ಟ 5 ಹೆಣ್ಣು 18 ಗಂಡು ಸೇರಿದಂತೆ 23 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಮುಸ್ಲಿಂರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳು ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಬಳಿ ಭಿಕ್ಷಾಟನೆಯಲ್ಲಿ ತೊಡಗಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಮತ್ತು ಮಹಿಳಾ ಮಕ್ಕಳ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ರಕ್ಷಣೆ ಮಾಡಿದ್ದಾರೆ.
ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ರಸ್ತೆ ಬದಿ ಭಿಕ್ಷಾಟನೆಯಲ್ಲಿ ತೊಡಗಿಸುತ್ತಿದ್ದರು. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 36 ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಮಕ್ಕಳನ್ನು ಪೊಲೀಸರು ಮಕ್ಕಳ ಕಲ್ಯಾಣ ಸಮಿತಿಗೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ