Latest

*ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಚುನಾವಣೆ ವೇಳೆ ಫೋನ್ ಟ್ಯಾಪಿಂಗ್ ನಡೆಯುತ್ತದೆ ಎಚ್ಚರವಾಗಿರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ವರಿಷ್ಠರು ಸೂಚನೆ ನೀಡಿದ್ದಾರೆ. ಯಾವುದೇ ರಹಸ್ಯ ವಿಚಾರಗಳನ್ನು ಫೋನಿನಲ್ಲಿ ಮಾತನಾಡದಂತೆ ಹೇಳಲಾಗಿದೆ.

Home add -Advt

ಪ್ರಮುಖ ವಿಚರಗಳನ್ನು ಮೊಬೈಲ್ ನಲ್ಲಿ ಪ್ರಸ್ತಾಪ ಮಾಡಬೇಡಿ. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವರಿಗೆ ಸೂಚನೆ ನೀಡಿದೆ. ಚುನಾವಣೆ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ಸಾಧ್ಯತೆ ಎಚ್ಚರದಿಂದ ಇರುವಂತೆ ತಿಳಿಸಿದೆ.

Related Articles

Back to top button