ಬಿಜೆಪಿ – ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಆ.6ರಂದು ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಟಗೇರಿ: ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಸಹಯೋಗದಲ್ಲಿ ಬೆಳಗಾವಿ ಮಹಾನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಗಸ್ಟ್ ೬ ರಂದು ಮುಂಜಾನೆ ೧೧ಗಂಟೆಗೆ ಬಿಜೆಪಿ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಜಂಟಿಯಾಗಿ ತಿಳಿಸಿದ್ದಾರೆ.
ಗೋಕಾಕ ತಾಲೂಕಿನ ಬೆಟಗೇರಿಯಲ್ಲಿ ಶನಿವಾರ ಆ.೩ರಂದು ಪತ್ರಿಕಾ ಹೇಳಿಕೆ ನೀಡಿದ ಅವರು, ಬೆಳಗಾವಿ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಆ.೬ ರಂದು ಮುಂಜಾನೆ ೧೧ ಗಂಟೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ನಡೆದ ಬಳಿಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮಾನ್ಯ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ, ಬೆಳಗಾವಿ ಜಿಲ್ಲಾ ಕುರುಬರ ಸಂಘದ ನಾಯಕರು, ಪದಾಧಿಕಾರಿಗಳು, ಸಂಚಾಲಕರು, ಸದಸ್ಯರು ಹಾಗೂ ಸಿದ್ಧರಾಮಯ್ಯನವರ ಅಭಿಮಾನಿ ಬಳಗ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳಬೇಕೆಂದು ಹೇಳಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ನಸಲಾಪೂರೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ, ಬೆಳಗಾವಿ ಜಿಲ್ಲಾ ಕುರುಬರ ಸಂಘದ ನಾಯಕರು, ಪದಾಧಿಕಾರಿಗಳು, ಸಂಚಾಲಕರು, ಸದಸ್ಯರು, ಇತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ