ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಸವಣ್ಣವರ ಕುರಿತು ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಬೆಳಗಾವಿಯಲ್ಲಿ ಲಿಂಗಾಯತ ಸಮಾಜದಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಇಂದು ನಗರದ ಚೆನ್ನಮ್ಮ ವೃತ್ತದಲ್ಲಿ ನೂರಕ್ಕೂ ಅಧಿಕ ಲಿಂಗಾಯತ ಸಮಾಜದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಸನಗೌಡ ಪಾಟೀಲ ಯತ್ನಾಳ್ ಭಾವ ಚಿತ್ರವಿರುವ ಪ್ರತಿಕೃತಿ ದಹಿಸಿ, ಬಾಯಿ ಬಾಯಿ ಬಡಿದುಕೊಂಡು, ಲಿಂಗಾಯತ ವಿರೋಧಿ ಯತ್ನಾಳ, ಹರಕುಬಾಯಿ ಯತ್ನಾಳ್ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ