Belagavi NewsBelgaum News

*ಕೇಂದ್ರ ಗೃಹ ಸಚಿವ ಅಮೀತ್ ಶಾ ವಿರುದ್ಧ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಅವಹೇಳನ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಯಿತು.‌

ಇಂದು ನಗರದ ಡಾ. ಬಿ ಆರ್ ಅಂಬೇಡ್ಕರ್ ಉದ್ಯಾನದಿಂದ ಆರಂಭವಾದ ಪ್ರತಿಭಟನೆಯು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿದರು.‌

ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರನ್ನು ಹಾಗೂ ಇಡೀ ದೇಶದ ಶೋಷಿತ ಸಮುದಾಯವನ್ನು ಅವಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರವರ ಬಗ್ಗೆ ಹಾಗೂ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ ಅವರನ್ನು ಗೂಂಡಾ ಕಾಯಿದೆಯಡಿ ಗಡಿಪಾರು ಮಾಡಬೇಕು. ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸಹ ಕೇಂದ್ರ ರಾಜ್ಯ ಸರ್ಕಾರಗಳು ಸರಿಯಾದ ದಿಟ್ಟ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ದಲಿತರ ಮೇಲೆ ದೌರ್ಜನ್ಯ ನಡೆದರೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Home add -Advt

Related Articles

Back to top button