
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕನ್ನಡ ಕಡೆಗಣಿಸಿ ನಿನ್ನೆ ಹಿಂದಿ ಹಾಗೂ ಮರಾಠಿಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.
ಜಿಲ್ಲಾಧ್ಯಕ್ಷ ಆರ್ ಅಭಿಲಾಷ್ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಮಹಾನಗರ ಪಾಲಿಕೆಯ ಎದುರುಗಡೆ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಮುಂದೆ ಇದೇ ರೀತಿ ಉದ್ಧಟತನ ಪ್ರದರ್ಶಿಸಿದರೆ ಅಂತಹ ಮರಾಠಿ ಪ್ರೇಮಿ ಮಹಾನಗರ ಪಾಲಿಕೆಯ ಸದಸ್ಯರಿಗೆ ಮಸಿ ಬಳಿಯುವುದಾಗಿ ಅಭಿಲಾಷ್ ಎಚ್ಚರಿಕೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ