*ಉಚಗಾಂವಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಕರವೇ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಉಚಗಾಂವ ಗ್ರಾಮ ಪ್ರವೇಶಿಸಲು ಯತ್ನಿಸಿದ ವಾಜೀದ್ ಹಿರೇಕೋಡಿ ಹಾಗೂ ಇತರೆ ಮೂವರು ಕನ್ನಡಪರ ಹೋರಾಟಗಾರರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಈ ವೇಳೆ ಪೊಲೀಸರು ಹಾಗೂ ಕನ್ನಡಪರ ಹೋರಾಟಗಾರರ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಉಚಗಾಂವ ಗ್ರಾಮದ ಒಳಗಡೆ ಪ್ರವೇಶಿಸುವ ಪ್ರತಿಯೊಂದು ವಾನಹವನ್ನು ತಡೆದು ಪರಿಶೀಲನೆ ನಡೆಸಿದರು. ಉಚಗಾಂವ ಗ್ರಾಮದ ದ್ವಾರ ಬಾಗಿಲ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪ್ರತಿಭಟನೆಕಾರರು ಕೇವಲ 4 ಜನರಿದ್ದರೆ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದರು!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ